ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬಸವರಾಜ ಬೊಮ್ಮಾಯಿ, ಸಂಸದೆ ಸುಮಲತಾ ಅಂಬರೀಶ್ ಸಹಿತ ಗಣ್ಯರು ಸೋಮವಾರ ಅಂಬರೀಷ್ ಅವರ ಸ್ಮಾರಕವನ್ನು ಉದ್ಘಾಟಿಸಿದ್ದಾರೆ.
ಈ ವೇಳೆ ಸುಮಲತಾ, ಅಂಬರೀಶ್ ತಮ್ಮ ಜೀವಿತಾವಧಿಯಲ್ಲಿ ಯಾರ ಬಳಿಯೂ ಕೈಚಾಚಿಲ್ಲ ಎಂದಿದ್ದರು. ಇದೀಗ ಈ ಮಾತನ್ನು ಮುಂದಿಸಿಕೊಂಡು, ನಟ,ಚೇತನ್ ಅಹಿಂಸಾ (Chetan Ahimsa), ಅಂಬರೀಶ್ ಯಾರ ಬಳಿಯೂ ಕೈಚಾಚಿರಲಿಲ್ಲ ಆದರೆ ಸ್ಮಾರಕ ನಿರ್ಮಾಣಕ್ಕಾಗಿ ಸುಮಲತಾ, ಸರ್ಕಾರದ ಬಳಿ ಕೈಚಾಚಿದ್ದಾರೆ ಎಂದಿದ್ದಾರೆ.
ಅಂಬರೀಶ್ ಸ್ಮಾರಕದ ಬಗ್ಗೆಖರ್ಚಾಗಿರುವ ಸರ್ಕಾರಿ ಹಣದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಚೇತನ್ , ಅನಗತ್ಯವಾಗಿದ್ದ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸುಮಲತಾರವರು ಅಂದಾಜು ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ‘ಕೈ ಚಾಚಿ’ ಪಡೆದಿರುವುದು ವಿಪರ್ಯಾಸವಾಗಿದೆ. ತೆರಿಗೆದಾರರ ಹಣವನ್ನು ಹೀಗೆ ದುರುಪಯೋಗಪಡಿಸಿಕೊಳ್ಳುವ ಬದಲು ಸುಮಲತಾರವರು ತಮ್ಮ ಸ್ವಂತದ 23.4 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ? ಎಲ್ಲಾ ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ? ಎಂದು ಪ್ರಶ್ನೆ ಮಾಡಿದ್ದಾರೆ.