ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳನ್ನೆಲ್ಲಾ ರದ್ದು ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಯಾಗುವ ಸಾಧ್ಯತೆಯಿರುವುದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರ ಇಂದಿನ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.
ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆಗಳಿಗೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಚುನಾವಣಾ ಆಯೋಗ ಇಂದು ಬೆಳಗ್ಗೆ 11:30ಕ್ಕೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಿದೆ. ನೀತಿ ಸಂಹಿತೆ ಸಹ ಇಂದಿನಿಂದಲೇ ಜಾರಿಯಾಗಲಿದೆ. ನೀತಿ ಸಂಹಿತೆ ಜಾರಿಯಾದ ಮೇಲೆ ಯಾವುದೇ ರೀತಿಯ ಸರ್ಕಾರಿ ಕಾರ್ಯಕ್ರಮಗಳು ನಡೆಯುವಂತಿಲ್ಲ.