March 15, 2026
Sunday, March 15, 2026
spot_img

WEATHER | ಮಳೆ ಕಥೆ ಇನ್ನೂ ಮುಗಿದಿಲ್ಲ, ರಾಜ್ಯದಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದಾದ್ಯಂತ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಬಾದಾಮಿ, ಕುಷ್ಟಗಿ, ಮುದ್ದೇಬಿಹಾಳ, ನಾಗಮಂಗಲ, ಬೆಂಗಳೂರು ನಗರ, ಕಾರ್ಕಳ, ಬೀದರ್, ನರಗುಂದ, ಆಗುಂಬೆ, ಕುಣಿಗಲ್, ಟಿಜಿ ಹಳ್ಳಿ, ಹಳಿಯಾಳ, ಮಂಗಳೂರು, ಕಲಘಟಗಿ, ಸೇಡಂ, ಯಲಬುರ್ಗಾ, ತಿಪಟೂರು, ಬೆಳ್ಳೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಮಳೆಯಿತ್ತು, ಅದಾದ ಬಳಿಕ ಬಿಸಿಲು ಕಾಣಿಸಿಕೊಂಡಿತ್ತು, ಸಂಜೆ ಶುಭ್ರ ಆಕಾಶವಿತ್ತು. ಆದರೆ ಇಂದು ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !