ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆ ಚುನಾವಣೆಯ ಕರ್ತವ್ಯಕ್ಕೆ ಗೈರಾದ ಹಿನ್ನೆಲೆಯಲ್ಲಿ ಇಬ್ಬರು ಪ್ರೌಢಶಾಲಾ ಶಿಕ್ಷಕರನ್ನು ಅಮಾನತು ಮಾಡಿ ವಿಜಯಪುರ ಜಿಲ್ಲಾ ಚುನಾವಣಾಧಿಕಾರಿ ಡಾ.ವಿಜಯಮಹಾಂತೇಶ ಆದೇಶ ಹೊರಡಿಸಿದ್ದಾರೆ.
ಬರಟಗಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಅಪ್ಪಣ್ಣ ಸವದಿ ಮತ್ತು ಕಳ್ಳಕವಟಗಿ ಪ್ರೌಢಶಾಲೆಯ ಸಹ ಶಿಕ್ಷಕ ಅಲ್ಲಾಭಕ್ಷ ಅವರನ್ನು ಅಮಾನತುಗೊಳಿಸಲಾಗಿದೆ.
ಚೆಕ್ ಪೋಸ್ಟ್ನಲ್ಲಿ ಕರ್ತವ್ಯಕ್ಕೆ ಅನಧಿಕೃತ ಗೈರಾದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇರಿಸಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.