ಹೆಚ್ಚುತ್ತಿದೆ ವಯಸ್ಸಿನ ಹಂಗಿಲ್ಲದೆ ಹೃದಯಾಘಾತ ಪ್ರಕರಣಗಳು: 13 ವರ್ಷದ ಬಾಲಕಿಯ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ವಯಸ್ಸಿನ ಹಂಗಿಲ್ಲದೆ ಏರುತ್ತಿರುವ ಹೃದಯಾಘಾತ ಪ್ರಕರಣಗಳು ಭಾರೀ ಆತಂಕವನ್ನುಂಟು ಮಾಡುತ್ತಿವೆ. ಇದೀಗ 13 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮಹಬೂಬಾಬಾದ್ ಜಿಲ್ಲೆಯ ಮಾರಿಪೇಡಾ ಮಂಡಲದ ಬೋಯ್‌ಪಾಲೆಂನಲ್ಲಿ ನಿನ್ನೆ ಬೆಳಗ್ಗೆ ಬಾಲಕಿ (13) ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಬೋಡಾ ಸ್ರವಂತಿ ಎಂಬ 13 ವರ್ಷದ ಬಾಲಕಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಶ್ರವಂತಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಬಾಲಕಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿದೆ. ಬಳಿಕ ಬಾಲಕಿ ಅಜ್ಜನ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.

ಮಲಗಿದ್ದ ಬಾಲಕಿ ಗುರುವಾರ ಮಧ್ಯಾಹ್ನ 12.30ರ ಸುಮಾರಿಗೆ ಎಚ್ಚರಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ತನಗೆ ಉಸಿರಾಟದ ತೊಂದರೆ ಹಾಗೂ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಬಾಲಕಿ ಅಜ್ಜಿಗೆ ಹೇಳಿದ್ದಳು. ಕುಟುಂಬಸ್ಥರು ಎದ್ದು ಬಾಲಕಿಯನ್ನು ಆಟೋದಲ್ಲಿ ವೈದ್ಯರ ಬಳಿ ಕರೆದುಕೊಂಡು ಹೋಗುವಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ ಸುದ್ದಿ ಹೊರಬಿದ್ದಿದ್ದು, ಗ್ರಾಮವೇ ಬೆಚ್ಚಿಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!