ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚಳಿ ಅಬ್ಬರಕ್ಕೆ ಜನರು ಕಂಗಾಲಾಗಿದ್ದಾರೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ತಾಪಮಾನ ಭಾರಿ ಕುಸಿತದವಾಗಿದ್ದು, ಇಂದು ಮತ್ತು ನಾಳೆಯೂ ಅದೇ ಸ್ಥಿತಿ ಮುಂದುವರಿಯಲಿದೆ. ಮಧ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗದಲ್ಲಿ ನಾಳೆ ಭಾರಿ ಚಳಿ ಇರಲಿದ್ದು ಅರೆಂಜ್ ಅಲರ್ಟ್ ಇರಲಿದೆ. ಕೊಪ್ಪಳ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಚಳಿ ಹೆಚ್ಚಿರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ನಾಳೆ ಮುಂಜಾನೆ ವೇಳೆ ಮಂಜು ಕವಿದ ವಾತಾವರಣ ಇರಲಿದ್ದು, ನಗರದ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಹಾಗೆಯೇ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 5-10 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಸಿಕ್ಕಾಪಟ್ಟೆ ಚಳಿ: ಯಾವ್ಯಾವ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ?

