ಹೊಸ ದಿಗಂತ ಡಿಜಿಟಲ್ ಡೆಸ್ಕ್:
2025 ರ ಅಂಡರ್-19 ಏಷ್ಯಾಕಪ್ ನ ಮೊದಲ ಪಂದ್ಯದಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಭಾರತ ಯುವ ಪಡೆ ಬರೋಬ್ಬರಿ 234 ರನ್ಗಳ ಭಾರಿ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ 6 ವಿಕೆಟ್‌ಗಳಿಗೆ 433 ರನ್ ಗಳಿಸಿತು. ತಂಡದ ಪರ ವೈಭವ್ ಸೂರ್ಯವಂಶಿ ಅದ್ಭುತ ಶತಕ ಬಾರಿಸಿದರು. ಇದಕ್ಕೆ ಪ್ರತಿಯಾಗಿ ಗುರಿ ಬೆನ್ನಟ್ಟಿದ ಯುಎಇ ತಂಡ 7 ವಿಕೆಟ್‌ಗಳ ನಷ್ಟಕ್ಕೆ 199 ರನ್‌ಗಳಿಸಲಷ್ಟೇ ಶಕ್ತವಾಗಿ ಪಂದ್ಯವನ್ನು 234 ರನ್‌ಗಳಿಂದ ಸೋತಿದೆ.

