ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕಾರು ಪಲ್ಟಿಯಾಗಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ಇಂದು(ಭಾನುವಾರ) ನಡೆದಿದೆ.
ರಂಗಕಲಾವಿದ ಬೆಳಗಲ್ಲು ವೀರಣ್ಣ ಅವರು ಬಳ್ಳಾರಿ ಮೂಲದವರಾಗಿದ್ದು, ‘ತೊಗಲು ಗೊಂಬೆ ಆಟ’ ಕಲೆಯ ಮೂಲಕ ತಮ್ಮದೆ ಛಾಪು ಮೂಡಿಸಿದ್ದರು.
ಕಾರಿನಲ್ಲಿದ್ದ ಬೆಳಗಲ್ಲು ವೀರಣ್ಣ ಅವರ ಪುತ್ರ ಹನುಮಂತಪ್ಪ ಅವರಿಗೂ ಗಾಯಗಳಾಗಿದ್ದು ಅವರನ್ನ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.