ಹೊಸದಿಗಂತ ವರದಿ, ಬಳ್ಳಾರಿ:
ನಾಡಿನ ಸಾಂಸ್ಕೃತಿಕ ರಾಯಭಾರಿ, ಕರ್ನಾಟಕ ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ, ಅಂತಾರಾಷ್ಟ್ರೀಯ ರಂಗಭೂಮಿ ಹಾಗೂ ತೊಗಲುಗೊಂಬೆ ಕಲಾವಿಧ ನಾಡೋಜ ಬೆಳಗಲ್ಲು ವೀರಣ್ಣ ಅವರು ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಪುತ್ರ ಹನುಮಂತ ಗಾಯಗೊಂಡಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.
ಸಾರ್ವಜನಿಕರು, ಕಲಾಭಿಮಾನಿಗಳು ಹಾಗೂ ಕಲಾ ವೃಂದದವರಿಗೆ ನಾಡೋಜ ಬೆಳಗಲ್ಲು ವೀರಣ್ಣ ಅವರ ಅಂತಿಮ ದರ್ಶನ ಪಡೆಯಲು ಏ.3 ರಂದು ಬೆ.10 ರಿಂದ ಮ. 3ರ ವರೆಗೆ ಬಳ್ಳಾರಿ ನಗರದ ರಾಘವ ಕಲಾ ಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ವ್ಯವಸ್ಥೆ ಮಾಡಲಾಗಿದೆ.