ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳ: 284 ಮಂದಿಗೆ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಂದು ದಿಢೀರ್ ಹೆಚ್ಚಳಗೊಂಡಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 284 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive) ದೃಢಪಟ್ಟಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ( Karnataka Health Department ) ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 9,043 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬಳ್ಳಾರಿ-20, ಬೆಂಗಳೂರು ಗ್ರಾಮಾತರ 05, ಬೆಂಗಳೂರು ನಗರ 170, ಚಾಮರಾಜನಗರ, ಗದಗ ಹಾಗೂ ಮಂಡ್ಯದಲ್ಲಿ ತಲಾ ಒಬ್ಬರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ಹೇಳಿದೆ.

ಚಿತ್ರದುರ್ಗ, ರಾಯಚೂರು ಮತ್ತು ತುಮಕೂರಿನಲ್ಲಿ ತಲಾ ಇಬ್ಬರಿಗೆ, ದಕ್ಷಇಣ ಕನ್ನಡ, ಕೊಪ್ಪಳ ಮತ್ತು ವಿಜಯಪುರದಲ್ಲಿ ತಲಾ ಮೂವರಿಗೆ, ದಾವಣಗೆರೆ 05, ಧಾರವಾಡ 08, ಹಾಸನ, ಹಾವೇರಿ ಮತ್ತು ಕೋಲಾರ 04, ಕಲಬುರ್ಗಿ 07, ಶಿವಮೊಗ್ಗ 34 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 05 ಸೇರಿದಂತೆ 284 ಮಂದಿಗೆ ಕೋವಿಡ್ ಪಾಸಿಟಿವ್ ಎಂದು ತಿಳಿದು ಬಂದಿದೆ. ಮಂದಿ ಸಕ್ರೀಯ ಸೋಂಕಿತರು ಇದ್ದಾರೆ. ಇಂದು ಓರ್ವ ಸೋಂಕಿತ ಬಲಿಯಾಗಿದ್ದಾರೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!