ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪಪುವಾ ನ್ಯೂಗಿನಿಯಾದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೇ ಮಾಹಿತಿ ನೀಡಿದೆ.
ಸೋಮವಾರ ಬೆಳಗ್ಗೆ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭೂಕಂಪವು ಕರಾವಳಿ ಪಟ್ಟಣವಾದ ವೆವಾಕ್‌ನಿಂದ 97 ಕಿಲೋಮೀಟರ್ ದೂರದಲ್ಲಿ 62 ಕಿಲೋಮೀಟರ್ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.
ಸ್ಥಳೀಯ ಕಾಲಮಾನ ಪ್ರಕಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಭೂಕಂಪ ಸಂಭವಿಸಿದೆ.
ಈ ಪ್ರದೇಶವು ಕಡಿಮೆ ಜನಸಂಖ್ಯೆಯನ್ನು ಹೊಂದಿದ್ದು, ಅಲ್ಲಿ ವಾಸಿಸುವ ಜನರಿಗೆ ಹಾನಿಯಾಗುವ ಸಾಧ್ಯತೆಯಿದೆ. ನೆಲದ ಸಡಿಲಗೊಳಿಸುವಿಕೆಯು ಗಣನೀಯವಾಗಿ ನೆಲದ ಕುಸಿತಕ್ಕೆ ಕಾರಣವಾಗಬಹುದು ಎಂದು ಭೂಕಂಪಶಾಸ್ತ್ರ ಸಂಸ್ಥೆ ಹೇಳಿದೆ.
ಇಂಡೋನೇಷ್ಯಾ ಗಡಿಯಿಂದ ಪೂರ್ವಕ್ಕೆ 100 ಕಿಲೋಮೀಟರ್ ದೂರದಲ್ಲಿರುವ ಪಪುವಾ ನ್ಯೂಗಿನಿಯಾ ದ್ವೀಪದಲ್ಲಿ ಈ ಭೂಕಂಪವು ಇಡೀ ಪ್ರದೇಶವನ್ನು ನಡುಗಿಸಿದೆ ಎಂದು ವರದಿಯಾಗಿದೆ.