ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕೇಂದ್ರ ತನಿಖಾ ದಳ(ಸಿಬಿಐ) ಆರಂಭವಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ನವದೆಹಲಿಯಲ್ಲಿ ನಡೆಯಲಿರುವ ವಜ್ರ ಮಹೋತ್ಸವ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ವಿಶೇಷ ಸೇವೆಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಹಾಗೂ ಸಿಬಿಐನ ಅತ್ಯುತ್ತಮ ತನಿಖಾಧಿಕಾರಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಿಬಿಐ ವಜ್ರ ಮಹೋತ್ಸವ ಸ್ಮರಣಾರ್ಥ ಅಂಚೆ ಇಲಾಖೆ ಹೊರತಂದಿರುವ ಅಂಚೆ ಚೀಟಿ ಬಿಡುಗಡೆಗೊಳಿಸಲಿದ್ದಾರೆ. ಈ ವೇಳೆ ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಿಬಿಐ ಕಚೇರಿ ಕಟ್ಟಡಗಳನ್ನೂ ಪ್ರಧಾನಿ ಉದ್ಘಾಟಿಸಲಿದ್ದಾರೆ. ತನಿಖಾ ಸಂಸ್ಥೆಯ ಟ್ವಿಟರ್ ಖಾತೆಗೂ ಚಾಲನೆ ನೀಡಲಿದ್ದಾರೆ.
ಕೇಂದ್ರೀಯ ತನಿಖಾ ದಳವನ್ನು 1963ರ ಏ.1ರಂದು ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ನಿರ್ಣಯದಿಂದ ಸ್ಥಾಪಿಸಲಾಗಿದೆ.