ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫುಡ್ ಕಿಟ್ ವಿತರಣೆ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕೃಷ್ಣಯ್ಯ ಶೆಟ್ಟಿ ವಿರುದ್ಧ ಕೇಸ್ ದಾಖಲಾಗಿದೆ.
ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೆಸರಿನಲ್ಲಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಫುಡ್ ಕಿಟ್ ಹಂಚಿಕೆ ಆರೋಪ ಕೇಳಿ ಬಂದಿದ್ದು ಕಿಟ್ ಹಂಚಿಕೆ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ದಾಳಿ ಮಾಡಿದ್ದ 7ಲಕ್ಷಕ್ಕೂ ಅಧಿಕ ಮೌಲ್ಯದ ಫುಡ್ ಕಿಟ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.