ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ, ರಾಜ್ಯ ಉಸ್ತುವಾರಿ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ.
ಕೂಡ್ಲಿಗಿ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಗೋಪಾಲಕೃಷ್ಣ, ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆಗೆ ನಿರ್ಧರಿಸಿದ್ದಾರೆ.