ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ‌ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ‌ ಮೇರೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ ಐವರ ವಿರುದ್ಧ ಸೋಮವಾರ ಎಫ್ಐಆರ್ ದಾಖಲಾಗಿದೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸಾರ್ವಜನಿಕರ ಬಳಕೆಗೆ ನೀಡಲಾಗಿದ್ದ ಆಂಬುಲೆನ್ಸ್‌ ಮೇಲೆ
ಪಕ್ಷದ ಪೋಸ್ಟರ್ ಜೊತೆಗೆ ಉಚಿತ ಸೇವೆ ಎಂದು ಬರೆಯಲಾಗಿತ್ತು. ಕನಕಗಿರಿಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಈ ವಾಹನವನ್ನು ಪೊಲೀಸರು ಎರಡು ದಿನಗಳ ಹಿಂದೆ ವಶಪಡಿಸಿಕೊಂಡಿದ್ದರು. ಆಂಬುಲೆನ್ಸ್‌ ಮೇಲೆ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ, ಬಳ್ಳಾರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಅರುಣಾ ಲಕ್ಷ್ಮೀ ಹಾಗೂ ಕನಕಗಿರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ.‌ವೆಂಕಟರಮಣ ಭಾವಚಿತ್ರಗಳಿತ್ತು.

ಇದೀಗ ಕನಕಗಿರಿ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ವೆಂಕಟರಮಣ ದಾಸರಿ, ಆಂಬುಲೆನ್ಸ್ ವಾಹನದ ಮಾಲೀಕ ಜಿ. ನವೀನಕುಮಾರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಿ ಅರುಣಾ ಮತ್ತು ಆಂಬುಲೆನ್ಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅನುಮತಿ ಪಡೆಯದೇ ಕಲ್ಯಾಣ ಪ್ರಗತಿ ಪಕ್ಷಕ್ಕೆ ಸೇರಿದ ವಾಹನ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿತ್ತು. ಆದ್ದರಿಂದ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!