ಯಾವುದೇ ಭ್ರಷ್ಟರನ್ನು ಬಿಡಬೇಡಿ: ಸಿಬಿಐಗೆ ಪ್ರಧಾನಿ ಮೋದಿ ಸಲಹೆ !

ಹೊಸದಿಗಂತ ಡಿಜಿಟಲ್ ಡೆಸ್ಕ್ :

ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ವಜ್ರ ಮಹೋತ್ಸವ ಸಮಾರಂಭವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಉದ್ಘಾಟನೆ ಮಾಡಿದರು.
ಈ ವೇಳೆ ಅವರು ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ಹೊಸದಾಗಿ ನಿರ್ಮಿಸಲಾದ ಸಿಬಿಐ ಕಚೇರಿ ಸಂಕೀರ್ಣಗಳನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಿಬಿಐ (CBI) ತನ್ನ ಕೆಲಸ ಮತ್ತು ತಂತ್ರಗಳ ಮೂಲಕ ಜನರಿಗೆ ನಂಬಿಕೆಯನ್ನು ನೀಡಿದೆ. ಇಂದಿಗೂ ಯಾವುದಾದರೂ ಒಂದು ಪ್ರಕರಣ ಇತ್ಯರ್ಥವಾಗದೇ ಉಳಿದಿದ್ದರೆ ಅದನ್ನು ಸಿಬಿಐಗೆ ವಹಿಸಬೇಕು ಎಂಬ ಬೇಡಿಕೆಗಳು ಕೇಳಿ ಬರುತ್ತವೆ. ವೃತ್ತಿಪರ (Professional) ಮತ್ತು ದಕ್ಷ ಸಂಸ್ಥೆಗಳಿಲ್ಲದೆ (Efficient Institutions) ಅಭಿವೃದ್ಧಿ ಹೊಂದಿದ ಭಾರತವನ್ನು (India) ನಿರ್ಮಿಸುವುದು ಸಾಧ್ಯವಿಲ್ಲ, ಆದ್ದರಿಂದ ಸಿಬಿಐಗೆ ದೊಡ್ಡ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.

ನೀವು ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೀರೋ ಅವರು ತುಂಬಾ ಶಕ್ತಿಶಾಲಿಗಳು ಎಂದು ನನಗೆ ತಿಳಿದಿದೆ, ಅವರು ವರ್ಷಗಳಿಂದ ಸರ್ಕಾರ ಮತ್ತು ವ್ಯವಸ್ಥೆಯ ಭಾಗವಾಗಿದ್ದಾರೆ. ಇಂದಿಗೂ ಅವರು ಕೆಲವು ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದಾರೆ. ಆದರೆ ನೀವು (ಸಿಬಿಐ) ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಬೇಕು, ಯಾವುದೇ ಭ್ರಷ್ಟರನ್ನು ಬಿಡಬಾರದು ಎಂದು ಮೋದಿ ಒತ್ತಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!