ಪ್ರಜಾಪ್ರಭುತ್ವವನ್ನು ಉಳಿಸಲು ಮಿತ್ರಕಾಲ ವಿರುದ್ಧದ ಹೋರಾಟ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಸೂರತ್ ನ್ಯಾಯಾಲಯವು ಜಾಮೀನು ನೀಡಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದು ಪ್ರಜಾಪ್ರಭುತ್ವವನ್ನು ಉಳಿಸಲು “ಮಿತ್ರಕಾಲ” ವಿರುದ್ಧದ ಹೋರಾಟ ಇದು. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ ಎಂದಿದ್ದಾರೆ.

ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸೋಮವಾರದ ವಿಚಾರಣೆಯ ಕೆಲವೇ ನಿಮಿಷಗಳ ನಂತರ ಹಿಂದಿಯಲ್ಲಿ ಟ್ವೀಟ್ ಮಾಡಿದ ರಾಹುಲ್ “ಇದು ಪ್ರಜಾಪ್ರಭುತ್ವವನ್ನು ಉಳಿಸಲು ‘ಮಿತ್ರಕಾಲ’ ವಿರುದ್ಧದ ಹೋರಾಟ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಮತ್ತು ಸತ್ಯವೇ ನನ್ನ ಬೆಂಬಲ’ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!