ಹೊಸದಿಗಂತ ಡಿಜಿಟಲ್ ಡೆಸ್ಕ್ :
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳದ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆಯಲ್ಲಿ ದಾಖಲಾತಿ ಹೆಚ್ಚಳಕ್ಕೆ ದೇಶಾದ್ಯಂತ ಹರಡುತ್ತಿರುವ ಓಮಿಕ್ರಾನ್ ಹೂಸ ರೂಪಾಂತರ ಕಾರಣವಲ್ಲಾ, ಜನರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇಲ್ಲಿ ನಾವು ಜಾಗರೂಕರಾಗಿರಬೇಕು , ಚಿಂತಿಸಬೇಕಾಗಿಲ್ಲ. ಪ್ರಸ್ತುತ ದೇಶದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ ಹೆಚ್ಚಳಕ್ಕೆ ಓಮಿಕ್ರಾನ್ನ ಉಪ-ರೂಪಾಂತರ ಕಾರಣವಲ್ಲಾ, ಇಲ್ಲಿ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ದೇಶದಲ್ಲಿ ಏಪ್ರಿಲ್ 1 ರಿಂದ ಏಪ್ರಿಲ್ 2ರ ನಡುವೆ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 2,994 ರಿಂದ 3,824ಕ್ಕೆ ಮತ್ತು ಏಪ್ರಿಲ್ 3ರಂದು 3,641 ಪ್ರಕರಣ ದಾಖಲಾಗುವುದರೊಂದಿಗೆ ದೇಶದಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ.