ಮೋಸ್ಟ್​ ವಾಂಡೆಟ್ ಗ್ಯಾಂಗ್​ಸ್ಟರ್ ದೀಪಕ್​ ಬಾಕ್ಸರ್​ ಮೆಕ್ಸಿಕೋದಲ್ಲಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ದೆಹಲಿಯ ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ದೀಪಕ್ ಬಾಕ್ಸರ್​ನನ್ನು ದೆಹಲಿ ಪೊಲೀಸರು ಮೆಕ್ಸಿಕೋದಲ್ಲಿ ಬಂಧಿಸಿದ್ದಾರೆ. ದರೋಡೆಕೋರನನ್ನು ಈ ವಾರಾಂತ್ಯದಲ್ಲಿ ಭಾರತಕ್ಕೆ ಕರೆತರಲಾಗುವುದು ಎಂದು ಹೇಳಿದ್ದಾರೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ದೆಹಲಿಯ ವಿಶೇಷ ತಂಡವು ಬಾಕ್ಸರ್ ಅನ್ನು ಮೆಕ್ಸಿಕೊದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ದೆಹಲಿ-ಎನ್‌ಸಿಆರ್‌ನ ಮೋಸ್ಟ್ ವಾಂಟೆಡ್ ದರೋಡೆಕೋರರಲ್ಲಿ ದೀಪಕ್ ಬಾಕ್ಸರ್ ಕೂಡ ಒಬ್ಬರಾಗಿದ್ದು, ನಕಲಿ ಪಾಸ್‌ಪೋರ್ಟ್‌ ಬಳಸಿ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಕ್ಸರ್ ಕಳೆದ ವರ್ಷ ಅಥವಾ ಜನವರಿಯಲ್ಲಿ ಮೆಕ್ಸಿಕೋಗೆ ತೆರಳಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!