ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದ ಕೆಂಧುಝರ್ ಪಟ್ಟಣದ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ಅವಘಡದಲ್ಲಿ ಸುಮಾರು 200 ಅಂಗಡಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಈ ದುರಂತದಲ್ಲಿ ವರ್ತಕರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಆರು ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ಹತೋಟಿಗೆ ತಂದರು.
ನೀರು ಪೂರೈಕೆಯಾಗದ ಕಾರಣ ಅಗ್ನಿಶಾಮಕ ಸಿಬ್ಬಂದಿಗೆ ಬೆಂಕಿ ನಂದಿಸಲು ಕಷ್ಟವಾಯಿತು. ಈ ಘಟನೆಯಲ್ಲಿ ಯಾರಾದರೂ ಸಾವನ್ನಪ್ಪಿದ್ದಾರೆಯೇ ಅಥವಾ ಗಾಯಗೊಂಡಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಈ ಅಪಘಾತದ ಕುರಿತು ಕೆಂಧೂಝರ್ ಜಿಲ್ಲಾ ಸಬ್ ಕಲೆಕ್ಟರ್ ರಾಮಚಂದ್ರ ಕಿಸ್ಕು ಪ್ರತಿಕ್ರಿಯಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ತಿಳಿಸಿದರು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಬೆಂಕಿಯಿಂದಾಗಿ ಸುಮಾರು ರೂ. 50 ಕೋಟಿಗೂ ಹೆಚ್ಚು ಆಸ್ತಿ ಹಾನಿಯಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ. ವ್ಯಾಪಾರಸ್ಥರು ತಮ್ಮ ಜೀವನೋಪಾಯದ ಅಂಗಡಿಗಳನ್ನು ಕಳೆದುಕೊಂಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು 7-8 ಗಂಟೆಗಳ ಕಾಲ ಶ್ರಮಿಸಬೇಕಾಯಿತು. ಎಂದು ಕೆಂಧೂಜರ್ ಸಬ್ ಕಲೆಕ್ಟರ್ ರಾಮಚಂದ್ರ ಕಿಸ್ಕು ತಿಳಿಸಿದ್ದಾರೆ.