ಹೊಸದಿಗಂತ ಡಿಜಿಟಲ್ ಡೆಸ್ಕ್ :
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಬೆಂಬಲಿಗರು ನೀಡಿರುವ ಕುಕ್ಕರ್ ಸ್ಫೋಟಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿಯಲ್ಲಿ ನಡೆದಿದ್ದು, ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.
ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಎನ್ನುವವರ ಮನೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಬೆಂಬಲಿಗರು ನೀಡಿರುವ ಕುಕ್ಕರ್ನಲ್ಲಿ ತರಕಾರಿ ಬೇಯಿಸಲು ಇಟ್ಟಿದ್ದರು. ಕಳಪೆ ಗುಣಮಟ್ಟದ ಕುಕ್ಕರ್ ಏಕಾಏಕಿ ಬ್ಲಾಸ್ ಆಗಿದ್ದು, ಸಮೀಪದಲ್ಲೇ ಇದ್ದ ತಾಯಿ ಮಗು ಭಾರಿ ಅನಾಹುತದಿಂದ ಪಾರಾಗಿದ್ದಾರೆ.
ಶಾಸಕ ಟಿ.ಡಿ.ರಾಜೇಗೌಡ ವಿರುದ್ಧ ಕುಕ್ಕರ್ ಹಂಚಿದ್ದ ಆರೋಪ ಕೇಳಿ ಬಂದಿದ್ದು ಕಳಪೆ ಕುಕ್ಕರ್ ನೀಡಿ ಜನರ ಜೀವದ ಜೊತೆ ಚಲ್ಲಾಟ ಆಡ್ತಿದ್ದಾರೆಂದು ಜನ ಕಿಡಿಕಾರಿದ್ದಾರೆ.