ಹೊಸದಿಗಂತ ವರದಿ ಮಡಿಕೇರಿ:
ಸೂಕ್ತ ದಾಖಲೆ ಇಲ್ಲದೆ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 3.60ಲಕ್ಷ ರೂ.ಗಳನ್ನು ಚುನಾವಣಾ ತಪಾಸಣಾ ತಂಡದ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ಕೊಪ್ಪ ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಗೂಡ್ಸ್ ವಾಹನವೊಂದನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಸೂಕ್ತ ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದುದು ಪತ್ತೆಯಾಗಿದೆ.
ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ನಿಯೋಜಿಸಿದ್ದ ತಪಾಸಣಾ ಸಿಬ್ಬಂದಿಗಳು ಹಣವನ್ನು ವಶಪಡಿಸಿಕೊಂಡು ಅದರ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮಂಗಳವಾರ ಇದೇ ತಪಾಸಣಾ ಗೇಟ್ ಬಳಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 5.50ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು.