ಹೊಸದಿಗಂತ ಡಿಜಿಟಲ್ ಡೆಸ್ಕ್ :
ತುಮಕೂರಿನ ಗುಬ್ಬಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಎಸ್ ಪ್ರಸನ್ನಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈ ಕುರಿತು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಗೌಡ ಮಾಹಿತಿ ನೀಡಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಆರೋಪದಡಿಯಲ್ಲಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವರಿಷ್ಠರ ಅನುಮೋದನೆಯ ಮೇರೆಗೆ ಪ್ರಸನ್ನಕುಮಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷರು ನೀಡಿರುವ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.