ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 17 ರವರೆಗೆ ವಿಸ್ತರಿಸಿದೆ.
ನ್ಯಾಯಾಂಗ ಬಂಧನದ ವಿಸ್ತರಣೆಯನ್ನು ಕೋರಿ ಏಜೆನ್ಸಿ ಅರ್ಜಿ ಸಲ್ಲಿಸಿದ್ದು, ತನಿಖೆ ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿದೆ.
ಕಳೆದ ವಾರ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.