ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಡಗು ಜಿಲ್ಲೆಯ ನಾಪೋಕ್ಲು ಸಹಿತ ವಿವಿದೆಡೆ ಬುಧವಾರ ಗುಡುಗು ಸಹಿತ ಮಳೆಯಾಗಿದೆ. ಸುತ್ತಮುತ್ತಲ ಗ್ರಾಮಗಳಲ್ಲಿ ಮಳೆಯಾಗಿದ್ದು ಧರೆಗೆ ತಂಪೆರೆದಿದೆ.

ಬಲ್ಲಮಾವಟಿ,ನೆಲಜಿ, ಎಮ್ಮೆಮಾಡು , ಕಕ್ಕಬ್ಬೆ ವ್ಯಾಪ್ತಿಯಲ್ಲಿ ಮಳೆಯಾಗಿದ್ದು ಕೋಟೇರಿಯಲ್ಲಿ ಆಲಿಕಲ್ಲು ಸಹಿತ 96 ಸೆಂಟ್ ಮಳೆಯಾಗಿದೆ. ಗಾಳಿ ಮಳೆಗೆ ನಾಪೋಕ್ಲು – ಕಕ್ಕಬೆ ಮುಖ್ಯ ಸಂಪರ್ಕ ರಸ್ತೆಗೆ ಕೋಟೇರಿ ಯಲ್ಲಿ ಅಡ್ಡಲಾಗಿ ಮರ ಒಂದು ಬಿದ್ದು ಸ್ವಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!