ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನವಮಿ ಮೆರವಣಿಗೆಯಲ್ಲಿ ಉಂಟಾದ ಹಿಂಸಾಚಾರ ಹನುಮ ಜಯಂತಿಯನ್ನು ಮರುಕಳುಹಿಸದಂತೆ ಶಾಂತಿಯುತವಾಗಿ ಆಚರಿಸಿ, ಎಲ್ಲಿಯೂ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
ಪೂರ್ಣ್ಬಾ ಮೇದಿನಿಪುರ ಜಿಲ್ಲೆಯ ದಿಘಾದಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ, ನಾಳೆ ಹನುಮ ಜಯಂತಿಯನ್ನು ಶಾಂತಿಯುತವಾಗಿ ಆಚರಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ.ಶಾಂತಿ ಕಾಪಾಡಿದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಬಂಗಾಳ ಶಾಂತಿಯ ನಾಡು. ಧರ್ಮವು ವೈಯಕ್ತಿಕ ಆಯ್ಕೆಯಾಗಿದ್ದು, ಎಲ್ಲರಿಗೂ ಹಬ್ಬಗಳ ಆಚರಣೆ ಮಾಡಬೇಕು ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಿಜೆಪಿ ನಡೆಸಿದ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.