ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಪೃಥ್ವಿ ಶಾ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಮಾಧ್ಯಮದ ಸಪ್ನಾ ಗಿಲ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪೃಥ್ವಿ ಶಾ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಗಿಲ್ ಪೊಲೀಸರಿಗೆ ದೂರು ನೀಡಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ ವರದಿಯನ್ನ ಲಗತ್ತಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕ್ರಿಕೆಟಿಗನ ವಿರುದ್ಧ ಐಪಿಸಿ ಸೆಕ್ಷನ್ 354, 509, 324 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ತಿಂಗಳು (ಫೆಬ್ರವರಿ) 16 ರಂದು, ಪೃಥ್ವಿ ಶಾ ತನ್ನ ಸ್ನೇಹಿತರೊಂದಿಗೆ ಮುಂಬೈನ ಸಾಂತಾಕ್ರೂಜ್ ಪ್ರದೇಶದ ಸ್ಟಾರ್ ಹೋಟೆಲ್‌ಗೆ ಊಟ ಮಾಡಲು ಹೋಗಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಕೆಲವರು ಪೃಥ್ವಿ ಶಾಗೆ ಸೆಲ್ಫಿ ಕೇಳಿದ್ದಾರೆ. ಅವರ ಕೋರಿಕೆಯಂತೆ ಪೃಥ್ವೀಶಾ ಮೊದಲು ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟರು. ನಂತ್ರ ತನ್ನ ಜೊತೆ ರೀಲ್ಸ್ ಮಾಡುವಂತೆ ಒತ್ತಾಯಿಸಿದ್ದು, ಇದಕ್ಕೆ ಶಾ ನಿರಾಕರಿಸಿದ್ದಾರೆ. ಆಗ ಕ್ರಿಕೆಟಿಗ ಮೇಲೆ ಹಲ್ಲೆಗೆ ಮುಂದಾದ ಸಪ್ನಾ ಗಿಲ್, ಶಾ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬೇಸ್‌ಬಾಲ್ ಸ್ಟಿಕ್‌ಗಳಿಂದ ದಾಳಿ ನಡೆಸಿದ್ದಾರೆ .