ಹೊಸದಿಗಂತ ವರದಿ ವಿಜಯಪುರ:
ಪೈಪೋಟಿಯ ಟಿಕೆಟ್ ಆಕಾಂಕ್ಷಿಗಳಿಂದ ತೀವ್ರ ಕುತೂಹಲ ಕೆರಳಿಸಿದ ವಿಜಯಪುರ ನಗರ ಕ್ಷೇತ್ರ ಹಾಗೂ ನಾಗಠಾಣ ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಹಂಚಿಕೆಯಾಗಿದ್ದು, ಕುತೂಹಲಕ್ಕೆ ತೆರೆ ಬಿದ್ದಿದೆ.
ವಿಜಯಪುರ ನಗರ ಮತಕ್ಷೇತ್ರಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ನಾಗಠಾಣ ಮೀಸಲು ಕ್ಷೇತ್ರಕ್ಕೆ ವಿಠ್ಠಲ ಕಟಕಧೋಂಡ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ವಿಜಯಪುರ ನಗರ ಕ್ಷೇತ್ರಕ್ಕೆ 26 ಜನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿದ್ದ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.
ಅಲ್ಲದೆ ನಾಗಠಾಣ ಮೀಸಲು ಕ್ಷೇತ್ರಕ್ಕೆ 14 ಜನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದು, ಈ ಪೈಕಿ ವಿಠ್ಠಲ ಕಟಕಧೋಂಡ ಅವರಿಗೆ ಟಿಕೆಟ್ ನೀಡಲಾಗಿದ್ದು, ಈ ಕ್ಷೇತ್ರದ ಟಿಕೆಟ್ ಪಡೆಯಲು ತೀವ್ರ ಲಾಬಿ ನಡೆಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರಗೆ ಹಿನ್ನಡೆಯಾಗಿದೆ.
ಇನ್ನು ಜಿಲ್ಲೆಯ ಸಿಂದಗಿ ಹಾಗೂ ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಬಾಕಿ ಉಳಿದಿದೆ.