ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಖ್ಯಾತಿ ಹೊಂದಿರುವ ನಟ ಸುದೀಪ್ ಬಿಜೆಪಿಗೆ ಬೆಂಬಲ ನೀಡುತ್ತಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಸುದೀಪ್ ಬಿಜೆಪಿ ಪರ ಪ್ರಚಾರದ ಕುರಿತು ಲೇವಡಿ ಮಾಡಿರುವ ಕಾಂಗ್ರೆಸ್‌ಗೆ ಇದನ್ನು ಸಹಿಸಲು ಆಗುತ್ತಿಲ್ಲ ಎಂದು ತಿರುಗೇಟು ನೀಡಿದರು.
ಕಾಂಗ್ರೆಸ್‌ನವರು ತಲೆ ಕೆಟ್ಟು ಏನು ಬೇಕಾದ್ರೂ ಮಾತನಾಡಬಹುದು. ನಮಗೆ ಸಿಗುತ್ತಿರುವ ಬೆಂಬಲ ಕಂಡು ಅವರಿಗೆ ಭಯ ಶುರುವಾಗಿದೆ ಎಂದರು.