ಹೊಸದಿಗಂತ ವರದಿ,ಬೆಳಗಾವಿ:
ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಗುರುವಾರ ಚುನಾವಣಾ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಧಾರವಾಡ ನಾಕಾ ಚೆಕ್ ಪೋಸ್ಟ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿರುವಾಗ ವೆಗೆನಾರ್ ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ರೂ 4.18 ಲಕ್ಷಗಳನ್ನು ಜಪ್ತಿ ಮಾಡಿ ನಿಯಮಾನುಸಾರ ಜಿಲ್ಲಾ ಖಜಾನೆಯಲ್ಲಿ ಇಡಲಾಗಿದೆ.