ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು(ಹಂತ-1) ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.
ಸುಮಾರು 2,20,972 ಚ.ಮೀ ವಿಸ್ತೀರ್ಣ ಹೊಂದಿರುವ ಈ ಟರ್ಮಿನಲ್ ಚೆನ್ನೈ ವಿಮಾನ ನಿಲ್ದಾಣದ ಪ್ರಯಾಣಿಕ ದಟ್ಟಣೆ ಮತ್ತು ಏರ್ ಟ್ರಾಫಿಕ್ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ನಿಲ್ದಾಣದ ನೆಲ ಮಹಡಿಯಲ್ಲಿ ರಂಗೋಲಿಯಂಥ ವಿನ್ಯಾಸಗಳನ್ನು ನೆಲದ ಮೇಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬಿಡಿಸಲಾಗಿದೆ.ಹೊಸ ಟರ್ಮಿನಲ್ ಸ್ಥಳೀಯ ತಮಿಳು ಸಂಸ್ಕೃತಿಯ ಪ್ರತಿಬಿಂಬವಾಗಿದೆ.
The new terminal in Chennai airport will greatly help the people of this great city and across Tamil Nadu. The terminal building also has a flavour of the rich culture of Tamil Nadu. pic.twitter.com/rDEy0Apr0b
— Narendra Modi (@narendramodi) April 8, 2023
ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ, ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.