ಸುದರ್ಶನ್‌, ವಿಜಯ್ ಶಂಕರ್ ಬ್ಯಾಟಿಂಗ್ ಅಬ್ಬರ: ಕೋಲ್ಕತಾಗೆ ಸವಾಲಿನ ಗುರಿ ನೀಡಿದ ಗುಜರಾತ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಾಯಿ ಸುದರ್ಶನ್‌ ಹಾಗೂ ವಿಜಯ್ ಶಂಕರ್ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಗುಜರಾತ್ ಟೈಟಾನ್ಸ್‌ ತಂಡವು 4 ವಿಕೆಟ್ ಕಳೆದುಕೊಂಡು 204 ರನ್‌ ಬಾರಿಸಿ ಕೋಲ್ಕತಾ ಗೆ ಸವಾಲಿನ ಗುರಿ ನೀಡಿದೆ.

ಸಾಯಿ ಸುದರ್ಶನ್ 53 ರನ್ ಬಾರಿಸಿದರೆ, ವಿಜಯ್ ಶಂಕರ್ ಕೇವಲ 24 ಎಸೆತಗಳಲ್ಲಿ ಅಜೇಯ 63 ರನ್ ಗಳಿಸಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ವೃದ್ದಿಮಾನ್ ಸಾಹ 17 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 17 ರನ್ ಬಾರಿಸಿ ಸುನಿಲ್‌ ನರೈನ್‌ಗೆ ವಿಕೆಟ್ ಒಪ್ಪಿಸಿದರು.

ಬಳಿಕ ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್‌ ಹಾಗೂ ಶುಭ್‌ಮನ್‌ ಗಿಲ್‌ 67 ರನ್‌ಗಳ ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್‌ 31 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 39 ರನ್ ಬಾರಿಸಿ ಸುನಿಲ್‌ ನರೈನ್‌ಗೆ ಎರಡನೇ ಬಲಿಯಾದರು.

ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಬದಲು ಬಳಗದಲ್ಲಿ ಸ್ಥಾನ ಪಡೆದ ಕನ್ನಡಿಗ ಅಭಿನವ್ ಮನೋಹರ್, 14 ರನ್‌ ಗಳಿಸಿ, ಕ್ಲೀನ್ ಬೌಲ್ಡ್‌ ಆದರು .

ಕಳೆದ ಪಂದ್ಯದಲ್ಲಿ ಅಜೇಯ ಅರ್ಧಶತಕ ಸಿಡಿಸಿದ್ದ ತ ಸಾಯಿ ಸುದರ್ಶನ್‌, ಇದೀಗ ಮತ್ತೊಮ್ಮೆ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. ಕೇವಲ 38 ಎಸೆತಗಳಲ್ಲಿ3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 53 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಕೊನೆಯಲ್ಲಿ ಸಿಡಲಬ್ಬರದ ಬ್ಯಾಟಿಂಗ್ ನಡೆಸಿದ ವಿಜಯ್‌ ಶಂಕರ್ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು. ವಿಜಯ್ ಶಂಕರ್‌ ಅಂತಿಮವಾಗಿ 24 ಎಸೆತಗಳನ್ನು ಎದುರಿಸಿ 4 ಬೌಂಡರ ಹಾಗೂ 5 ಸಿಕ್ಸರ್ ಸಹಿತ 63 ರನ್ ಬಾರಿಸಿ ಅಜೇಯರಾಗುಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!