Sunday, December 14, 2025

ಕರ್ತವ್ಯಕ್ಕೆ ತೆರಳುತ್ತಿದ್ದ ಟಿಕೆಟ್ ಇನ್ಸ್‌ಪೆಕ್ಟರ್‌ಗೆ ಮಸಣವಾದ ಹೆದ್ದಾರಿ: ಸ್ಥಳದಲ್ಲೇ ಕೊನೆಯುಸಿರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದ ಭೀಕರ ಅಪಘಾತದಲ್ಲಿ, ಸಾರಿಗೆ ಬಸ್‌ ಟಿಕೆಟ್‌ ತಪಾಸಣೆಗೆ ತೆರಳುತ್ತಿದ್ದ ಚೆಕಿಂಗ್ ಇನ್ಸ್‌ಪೆಕ್ಟರ್‌ರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಶಕುನಿಗೌಡ (57) ಎಂದು ಗುರುತಿಸಲಾಗಿದೆ. ಇವರು ನಲ್ಲೂರು-ಮಗ್ಗೆ ಮಾರ್ಗದಲ್ಲಿ ಬರುತ್ತಿದ್ದ ಸಾರಿಗೆ ಬಸ್‌ ಅನ್ನು ತಡೆದು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಲು ಹೆದ್ದಾರಿ ಕಡೆಗೆ ಹೋಗುತ್ತಿದ್ದಾಗ, ವೇಗವಾಗಿ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅಧಿಕಾರಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಡೆದ ಕೂಡಲೇ ಕ್ಯಾಂಟರ್ ಲಾರಿ ಚಾಲಕ ವಾಹನವನ್ನು ನಿಲ್ಲಿಸದೇ, ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಆಲೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

error: Content is protected !!