ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಸ್ಪರ್ಧೆಗೆ ಕಣಕ್ಕೆ ಇಳಿದಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕೆಎಲ್ ರಾಹುಲ್, ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ.
ಆರ್‌ಸಿಬಿ ತಂಡ ಪಂದ್ಯಕ್ಕಾಗಿ ಕರ್ಣ್ ಶರ್ಮ, ಆಕಾಶ್ ದೀಪ್ ಸಿಂಗ್ ಹಾಗೂ ಮಿಚೆಲ್ ಬ್ರೇಸ್‌ವೆಲ್‌ರನ್ನು ಹೊರಹಾಕಿದೆ. ಲಖನೌ ತಂಡ ಯಶ್ ಠಾಕೂರ್ ಹಾಗೂ ಟಿಮ್ ಶೆಫರ್ಡ್‌ರನ್ನು ಕೈಬಿಟ್ಟಿದ್ದು, ಮಾರಕ ವೇಗಿ ಮಾರ್ಕ್ ವುಡ್ ತಂಡಕ್ಕೆ ವಾಪಸಾಗಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿ.ಕೀ), ಜಯದೇವ್ ಉನದ್ಕತ್, ಅಮಿತ್ ಮಿಶ್ರಾ, ಅವೇಶ್ ಖಾನ್, ಮಾರ್ಕ್ ವುಡ್, ರವಿ ಬಿಷ್ಣೋಯ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ), ಅನುಜ್ ರಾವತ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.