ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಇದರ ನಡುವೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ.ಬಹುಶಃ ಮೊದಲ ಪಟ್ಟಿಯನ್ನು ನಾಳೆ ಅಥವಾ ಮರುದಿನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆ ಇತ್ತು. ಆದರೆ ಹೆಚ್ಚಿನ ಚರ್ಚೆಗಳು ನಡೆಯಬೇಕಾಗಿರುವುದರಿಂದ, ಅದನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಬಹುದು ಎಂದು ತಿಳಿಸಿದರು.