ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ (D roopa) ಮಾತನಾಡದಂತೆ ವಿಧಿಸಲಾಗಿದ್ದ ತಡೆಯನ್ನು ನ್ಯಾಯಾಲಯ ತೆರವುಗೊಳಿಸಿದೆ.
ಕಳೆದೆರಡು ತಿಂಗಳ ಹಿಂದೆ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಣಿ ವಿರುದ್ಧ ಮಾತನಾಡದಂತೆ ರೂಪಾಗೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು.
ಇದೀಗ ಈ ಮಧ್ಯಂತರ ಆದೇಶವನ್ನು ನ್ಯಾಯಾಲಯತೆರವುಗೊಳಿಸಿದೆ.
ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ಸಲ್ಲಿಸಿದ್ದರು. ರೋಹಿಣಿ ವಿರುದ್ಧ ಇರುವ ಆರೋಪ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವೇಳೆ ರೂಪಾ ಅವರಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ರೋಹಿಣಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿತ್ತು.