ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಅಭ್ಯರ್ಥಿಗಳ ಪಟ್ಟಿಯ ಚರ್ಚೆ ಬಳಿಕ, ಇಂದು ರಾತ್ರಿ 9 ಗಂಟೆಗೆ ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ನಾಯಕರ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ.
ಈ ಸುದ್ದಿಗೋಷ್ಠಿಯಲ್ಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಹಲವು ಹಿರಿಯ ನಾಯಕರ ಸಭೆ, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸೋ ಸಂಬಂಧ ನಡೆಯಿತು.
ಇದರ ಬೆನ್ನಲ್ಲೇ ದೆಹಲಿಯ ಕೇಂದ್ರ ಕಚೇರಿಯಲ್ಲಿ ಇಂದು ರಾತ್ರಿ 9ಕ್ಕೆ ಮಹತ್ವದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ.