ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕಾರಣಿಗಳ ಟೆಂಪಲ್ ರನ್ ಶುರುವಾಗಿದೆ. ದೇಗುಲ ಭೇಟಿ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದಾರೆ.
ಸಿಎಂ ಬೊಮ್ಮಾಯಿ ಕುಟುಂಬಸಮೇತ ಆಗಮಿಸಿ, ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದ್ದಾರೆ.ಬೊಮ್ಮಾಯಿ ದಂಪತಿ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು.
ದೇವಸ್ಥಾನದ ಭೇಟಿ ವೇಳೆ ಬಿಜೆಪಿಯ ಜಿಲ್ಲಾ ಮುಖಂಡರು ಸಿಎಂ ದಂಪತಿಗೆ ಸಾಥ್ ನೀಡಿದ್ದಾರೆ. ಅಲ್ಲದೆ ಸಿಎಂ ದರುಶನಕ್ಕೆ ಆಗಮಿಸಿದ್ದಾಗ ಅಲ್ಲಿ ಅವರ ಜೊತೆಗೆ ನಟ ರಿಷಬ್ ಶೆಟ್ಟಿ ಸಹ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.