ಹೊಸದಿಗಂತ ವರದಿ ವಿಜಯಪುರ:
ಹಿಂದುತ್ವದ ಜೊತೆ ಅಭಿವೃದ್ಧಿ ಕೆಲಸ ಕಾರ್ಯ ಮಾಡಿದ್ದೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಗುರುಕುಲ ರಸ್ತೆಯಲ್ಲಿ ಗುರುವಾರ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಯೇತರ ಅಭ್ಯರ್ಥಿಗಳಿಗೆ ಬೆಂಬಲಿಸುವಂತವರು ಇಲ್ಲ. ಎಲ್ಲರೂ ಬಿಜೆಪಿಗೆ ಬೆಂಬಲಿಸಬೇಕೆಂದು ಮನವಿ ಮಾಡಿದರು.
ಕೆಲ ಕುತಂತ್ರಿಗಳು ಆಟವಾಡುತ್ತಾರೆ. ಯಾರು ಯಾರ ಗಾಡಿಯಲ್ಲಿ ತಿರುಗಾಡುತ್ತಾರೆ ಎಂಬುದು ಗೊತ್ತಿದೆ ಎಂದು ಪರೋಕ್ಷವಾಗಿ ಸ್ವಪಕ್ಷಿಯ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ವಿರೋಧಿಗಳಿಗೆ ಟಾಂಗ್ ನೀಡಿದರು.
ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ. ನಮ್ಮ ಹಿಂದೂ ಸಮಾಜದ ಮತದಾರರು ನೂರಕ್ಕೆ ನೂರರಷ್ಟು ಮತದಾನ ಮಾಡಬೇಕು. ಮೇ 13 ರಂದು ವಿಜಯೋತ್ಸವ ಆಚರಿಸೋಣ ಎಂದರು.