ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಇಂದಿನಿಂದ ನಾಮಪತ್ರ ( Nomination File) ಸಲ್ಲಿಕೆ ಆರಂಭವಾಗಿದೆ. ಮೊದಲ ದಿನವೇ ಬಿಜೆಪಿ ಸೇರಿದಂತೆ ಹಲವು ಪಕ್ಷಗಳಿಂದ ನಾಮಪತ್ರವನ್ನು ಅಭ್ಯರ್ಥಿಗಳು ಸಲ್ಲಿಸಿದ್ದಾರೆ.
ಏಪ್ರಿಲ್ 15ರಂದು ಹಾವೇರಿಯ ಶಿಗ್ಗಾಂವಿ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ.