ಸಂಸತ್‌ನಲ್ಲಿ ಸಂವಿಧಾನ ಶಿಲ್ಪಿಗೆ ರಾಷ್ಟ್ರಪತಿ, ಪ್ರಧಾನಿಯಿಂದ ಗೌರವಪೂರ್ಣ ಪುಷ್ಪ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂಬೇಡ್ಕರ್ ಜಯಂತಿಯ ಅಂಗವಾಗಿ ಸಂಸತ್ ಭವನದ ಹುಲ್ಲುಹಾಸಿನಲ್ಲಿ ಡಾ ಬಿಆರ್ ಅಂಬೇಡ್ಕರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪನಮನ ಸಲ್ಲಿಸಿದರು.

“ನಮ್ಮ ಸಂವಿಧಾನದ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರ ಜನ್ಮದಿನದ ಸಂದರ್ಭದಲ್ಲಿ ನಾನು ಎಲ್ಲಾ ಸಹ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ” ಎಂದು ರಾಷ್ಟ್ರಪತಿ ಟ್ವೀಟ್‌ ಮಾಡಿದ್ದಾರೆ.

ಸಂವಿಧಾನ ಶಿಲ್ಪಿಯ ಜನುಮದಿನದಂದು ಟ್ವೀಟ್‌ ಮಾಡಿದ ಪ್ರಧಾನಿ, “ಸಮಾಜದ ವಂಚಿತ ಮತ್ತು ಶೋಷಿತ ವರ್ಗಗಳ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪೂಜ್ಯ ಬಾಬಾಸಾಹೇಬ್‌ಗೆ ಅವರ ಜನ್ಮ ವಾರ್ಷಿಕೋತ್ಸವದಂದು ನೂರಾರು ನಮಸ್ಕಾರಗಳು. ಜೈ ಭೀಮ್!” ಎಂದು ಪೋಸ್ಟ್‌ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು. “ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಹಕ್ಕುಗಳನ್ನು ಖಾತ್ರಿಪಡಿಸಿದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದ ನಮನಗಳು. ಎಲ್ಲಾ ಸೌಕರ್ಯಗಳನ್ನು ತ್ಯಾಗ ಮಾಡಿ, ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅವರ ಆದರ್ಶಗಳು ಮತ್ತು ಆಲೋಚನೆಗಳು ನಮ್ಮ ಹಾದಿಯನ್ನು ಮುನ್ನಡೆಸುತ್ತವೆ ಎಂದು ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!