ಹೊಸದಿಗಂತ ಡಿಜಿಟಲ್ ಡೆಸ್ಕ್ :
ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತೋತ್ಸವವನ್ನು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಚರಿಸಲಾಯಿತು. ಈ ವೇಳೆ ಬಾಬಾ ಸಾಹೇಬರ ಜೀವನ- ಆದರ್ಶಗಳನ್ನು ಅಳವಡಿಸಿಕೊಳ್ಳಲು ಕೋರಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಪಿ.ಸಿ. ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.