ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.
ವೆಂಕಟಸ್ವಾಮಿ ಅವರಿಗೆ ಒಂದು ತಿಂಗಳಿನಲ್ಲಿ ಮೂರು ಬಾರಿ ಎದೆನೋವು ಕಾಣಿಸಿತ್ತು. ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ವೆಂಕಟಸ್ವಾಮಿ ಕೊನೆಯುಸಿರೆಳೆದಿದ್ದಾರೆ.
ಸ್ವಗ್ರಾಮ ಸಾದಹಳ್ಳಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಳೆದ ತಿಂಗಳು ಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ತೊಡಗಿದ್ದ ವೆಂಕಟಸ್ವಾಮಿ ಅವರಿಗೆ ಪ್ರಚಾರ ಮುಗಿಸಿ ಮನೆಗೆ ಬಂದಾಗ ಒಂದು ಬಾರಿ ಹೃದಯಾಘಾತವಾಗಿತ್ತು, ತದನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಬಾರಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಸಾಕಷ್ಟು ಪ್ರಚಾರ ಮಾಡುತ್ತಿದ್ದರು. ಆದರೆ ಈ ಬಾರಿಯೂ ಅವರಿಗೆ ಟಿಕೆಟ್ ಕೈ ತಪ್ಪಿತ್ತು.