Saturday, December 13, 2025

ತಂಗಿಯ ಬರ್ತ್‌ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ನವವಿವಾಹಿತೆ ಆತ್ಮಹತ್ಯೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶ್ಯಾಮಭಟ್ಟರಪಾಳ್ಯದಲ್ಲಿ ನಡೆದಿದೆ. ತಂಗಿಯ ಬರ್ಥ್‌ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ಆಕೆ ಮನನೊಂದಿದ್ದ ಎನ್ನಲಾಗಿದೆ.

ತಿಪಟೂರು ಮೂಲದ ಐಶ್ವರ್ಯ(22) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಲಕ್ಷ್ಮಿನಾರಾಯಣ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಾಗಿ ತಿಳಿದುಬಂದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಲಿಂಗ್ ಹುಕ್‌ಗೆ ಹಗ್ಗದ ಮೂಲಕ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ತಂಗಿಯ ಬರ್ತ್‌ಡೇ ಪಾರ್ಟಿಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ನೆಲಮಂಗಲ ಸರ್ಕಾರಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

error: Content is protected !!