ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ದಿನಕ್ಕೊಬ್ಬರ ಹೇಳಿಕೆ ನಾನಾ ಊಹಾಪೋಹ ಸೃಷ್ಟಿಸುತ್ತಿವೆ. ಇದೀಗ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್, ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ನಾಯಕತ್ವ ಬದಲಾವಣೆ ಚರ್ಚೆಗೆ ದೊಡ್ಡ ತಿರುವು ಕೊಟ್ಟಿದ್ದಾರೆ.
ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇಕ್ಬಾಲ್ ಹುಸೇನ್ ಮಾತನ್ನು ಯಾರು ನಂಬಲು ಹೋಗಬೇಡಿ. ಅವನ ಮೇಲೆ ಮೊದಲು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ದೇವನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಇಕ್ಬಾಲ್ ಹುಸೇನ್ಗೆ ಮಾತಿನ ಚಟ. ಯಾರು ಅವನ ಮಾತನ್ನು ನಂಬಲು ಹೋಗಬೇಡಿ ಎಂದು ಸಿಡಿಮಿಡಿಗೊಂಡಿದ್ದಾರೆ.
ಇನ್ನು ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 140 ಶಾಸಕರಿಗೂ ಡಿ.ಕೆ.ಶಿವಕುಮಾರ್ ಅಧ್ಯಕ್ಷರು. ಮೊದಲು ನೋಟಿಸ್ ಕೊಟ್ಟಿದ್ದಾರೆ, ಈಗಲೂ ಒಂದೆರಡು ಕೊಡಲಿ. ನೋಟಿಸ್ ಕೊಟ್ಟರೆ ನಾನು ಪಾಲನೆ ಮಾಡಬೇಕಾಗುತ್ತೆ. ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

