ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಪರಿಷತ್ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದ ಬಿಜೆಪಿ ನಾಯಕ ಆಯನೂರು ಮಂಜುನಾಥ್ ಇಂದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಲು ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಬಿಫಾರ್ಮ್ ಕೂಡ ಪಡೆದುಕೊಂಡಿದ್ದಾರೆ. ನಾಳೆ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
ಶಿವಮೊಗ್ಗ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ಘೋಷಣೆ ಮಾಡಿದ್ದರು. ಶಿವಮೊಗ್ಗದಲ್ಲಿ ಇನ್ನು ಬಿಜೆಟ್ ಟಿಕೆಟ್ ಘೋಷಣೆ ಮಾಡಿಲ್ಲ. ಘೋಷಣೆಗೂ ಮೊದಲೇ ಆಯನೂರು ಮಂಜುನಾಥ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದು, ಇದೀಗ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರಿದ್ದಾರೆ.