ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ ಅಭಿಷೇಕ್ ಬಚ್ಚನ್ ಇದೀಗ ಹೈ ಕೋರ್ಟ್ ಮೆಟ್ಟಿಲೇರಿದ್ದಾಳೆ. ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಯುಟ್ಯೂಬ್ ಚಾನೆಲ್ ಬಗ್ಗೆ ಬೇಸರಿಸಿಕೊಂಡು ಆರಾಧ್ಯ ಕೋರ್ಟ್ ಮೆಟ್ಟಿಲೇರಿದ್ದಾಳೆ.
11 ವರ್ಷದ ಆರಾಧ್ಯ ಆರೋಗ್ಯ ಸರಿಯಿಲ್ಲ, ಇನ್ನಿತರ ಸುಳ್ಳು ಸುದ್ದಿಯನ್ನು ಯುಟ್ಯೂಬ್ ಚಾನೆಲ್ ಒಂದರಲ್ಲಿ ವರದಿ ಮಾಡಲಾಗಿತ್ತು. ಈ ಸುಳ್ಳು ಸುದ್ದಿ ಪ್ರಸಾರ ನಿಲ್ಲಿಸುವಂತೆ ತಡೆಯಾಜ್ಞೆ ಕೋರಿದ್ದು, ಇಂದು ವಿಚಾರಣೆ ನಡೆಯಲಿದೆ.