ಹೊಸದಿಗಂತ ಡಿಜಿಟಲ್ ಡೆಸ್ಕ್ :
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿದೆ. ಕೊಡಗು ಮೂರನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ ಮತ್ತು ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ದ್ವಿತೀಯ ಪಿಯು ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ.
ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು :
ಕಲಾ ವಿಭಾಗದಲ್ಲಿ ಜಯನಗರದ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶೇಖ್ 600ಕ್ಕೆ 593 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿಜ್ಞನಾ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನ ಪಡೆದುಕೊಂಡಿದ್ದಾರೆ.