ಹೊಸದಿಗಂತ ಡಿಜಿಟಲ್ ಡೆಸ್ಕ್ :
2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ ಸ್ಥಾನದಲ್ಲಿದೆ.