ಬಹುಮತದಿಂದ ಬಿಜೆಪಿಗೆ ಜಯ ಖಚಿತ: ಬಿಎಸ್‌ವೈ ವಿಶ್ವಾಸ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸುತ್ತಿದೆ. ಆದರೆ ಬಿಜೆಪಿ ಬಹುಮತ ಪಡೆದು ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದ್ದು ಯಾರ ಸಹಾಯವೂ ಇಲ್ಲದೆ ಸರ್ಕಾರ ರಚನೆಯಾಗಲಿದೆ ಎಂದಿದ್ದಾರೆ.

ಇಂದಿನಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತೇನೆ. ಯಾರ ಬೆಂಬಲವೂ ಬೇಡ. ಈ ಬಾರಿ ಯಾರ ಬೆಂಬಲವಿಲ್ಲದೆ ರಾಜ್ಯದಲ್ಲಿ ಸರ್ಕಾರ ಮಾಡುವುದು ಖಚಿತ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!